ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್, ಪುತ್ತೂರು ಮತ್ತು ಅದರ ಮಾತೃ ಸಂಸ್ಥೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ.) ಇದರ ಸಹಯೋಗದಲ್ಲಿ ತಾರೀಕು 05-09-2018 ರಂದು ಬೈಂದೂರು ಪ್ರಭಾಕರ್ ರಾವ್ ಸಭಾಂಗಣ, ವಿವೇಕಾನಂದ ಪದವಿ ಕಾಲೇಜು, ಪುತ್ತೂರಿನಲ್ಲಿ ಶಿಕ್ಷಕರ ಗುಣಮಟ್ಟ ಸಾಧನ ಘಟಕದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭಕ್ಕೂ ಮೊದಲು ಸರಸ್ವತಿ ಪೂಜೆ ನಡೆಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ನ ಅಧ್ಯಕ್ಷರಾದ ಶ್ರೀ. ಎ. ವಿ. ನಾರಾಯಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಸಂಚಾಲಕರಾದ ಶ್ರೀಮತಿ ಶ್ರೀದೇವಿ ಕಾನಾವು ಇವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ನ ಪ್ರಿನ್ಸಿಪಾಲ್ ಡಾ. ದಿನೇಶ್ ಚಂದ್ರ ಉಪಸ್ಥಿತರಿದ್ದರು.
ಈ ಕಾರ್ಯಕ್ರಮವು ತಮ್ಮ ವೃತ್ತಿ ಬದುಕನ್ನು ಶಿಕ್ಷಕರಾಗಿಯೇ ಮುಂದುವರಿಸಲು ಇಚ್ಛೆ ಇರುವ ಪದವಿ ವಿದ್ಯಾರ್ಥಿಗಳಿಗೆ ಪದವಿ ಹಂತದಲ್ಲೇ ಪ್ರೇರಣೆ ನೀಡಿ ಉತ್ತಮ ಗುರುಗಳನ್ನು ಸಮಾಜಕ್ಕೆ ನೀಡಲು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರಾರಂಬಿಸಿರುವ ಒಂದು ವಿಶೇಷ ಘಟಕವಾಗಿದೆ.
ಮೊದಲ ಅವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಗಣಪತಿ ಹೆಗಡೆ, ಇವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಶಿಕ್ಷಕ ಮತ್ತು ಶಿಕ್ಷಣದ ಮಹತ್ವವನ್ನು ತಿಳಿಸಿದರು.
ಎರಡನೇ ಅವಧಿಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ನ ಉಪನ್ಯಾಸಕರಾದ ಡಾ. ಶೋಭಿತ ಎಂ. ಕೆ. ಇವರು ಸೃಜನಶೀಲತೆ ಮತ್ತು ಶಿಕ್ಷಕ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕೊನೆಯ ಅವಧಿಯಲ್ಲಿ ರಾಷ್ಟ್ರ ಮಟ್ಟದ ವಿಕಸನ ತರಬೇತುದಾರರಾದ ಶ್ರೀ ರಾಜೇಂದ್ರ ಭಟ್ ಇವರಿಂದ ಪರಿಣಾಮಕಾರಿ ಸಂವಹನ ಎಂಬ ವಿಷಯದ ಬಗ್ಗೆ ಉಪನ್ಯಾಸ ನಡೆಯಿತು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ವಿವೇಕಾನಂದ ಕಾಲೇಜ್ ಆಫ್ ಎಜುಕೇಷನ್ನ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು, ಪದವಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಶಿಕ್ಷಕರು ಉಪಸ್ಥಿತರಿದ್ದರು.