ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ವತಿಯಿಂದ ಹಿಂದುತ್ವ- ರಾಷ್ಟ್ರೀಯತೆಯ ಸಂಕಲ್ಪದೊಂದಿಗೆ ವಿವೇಕಾನಂದ ಜಯಂತಿಯು ದಿನಾಂಕ 12-01-2023ನೇ ಗುರುವಾರದಂದು ವಿವೇಕಾನಂದ ಕ್ಯಾಂಪಸ್ ನೆಹರುನಗರ, ಪುತ್ತೂರು ಇಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ಅನಂತಕುಮಾರ್ ಹೆಗಡೆ, ಮಾನ್ಯಸಂಸದರು ಉತ್ತರಕನ್ನಡ ಜಿಲ್ಲೆ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ಮಾಜಿ ಸಚಿವರು, ಭಾರತ ಸರ್ಕಾರ ಇವರು ಆಗಮಿಸಿ, ಹಿಂದುತ್ವ ಮತ್ತು ರಾಷ್ಟ್ರೀಯತೆಯ ಬಗ್ಗೆ ಮಾತಾಡಿದರು.
ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ ಎಂ ಕೃಷ್ಣ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಹಿಸಿದ್ದರು. ಇವರು ಸನಾತನ ಸಂಸ್ಕೃತಿಯ ಬಗ್ಗೆ ವಿವರಿಸಿದರು. ಹಾಗೆಯೇ ಕಾರ್ಯಕ್ರಮದಲ್ಲಿ ಕಾಲೇಜಿನ ಸಹಪ್ರಾಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು. ಇದರೊಂದಿಗೆ ವಿವೇಕಾನಂದ ಜಯಂತಿ ಪ್ರಯುಕ್ತ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮಕ್ಕೆ ಡಾ. ಕೆ ಎಂ ಕೃಷ್ಣ ಭಟ್ ಸ್ವಾಗತಿಸಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಶ್ರೀ. ಪಿ ಸತೀಶ್ ರಾವ್ ವಂದಿಸಿದರು.ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿಯಾದ ಶ್ರೀಮತಿ ಕವಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿವೇಕಾನಂದ ವಿದ್ಯಾವರ್ಧಕ ಸಂಘದ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.